ADVERTISEMENT

ಡಿಕೆಶಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ ಹಚ್ಚುವುದು ಸರಿಯಲ್ಲ: ಡಾ.ಕೆ ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 6:30 IST
Last Updated 5 ಅಕ್ಟೋಬರ್ 2020, 6:30 IST
ಡಾ.ಕೆ.ಸುಧಾಕರ್‌
ಡಾ.ಕೆ.ಸುಧಾಕರ್‌   

ಬೆಂಗಳೂರು: ‘ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಅಮಿತ್ ಶಾ ಅವರಿಗೆ 2 ವರ್ಷ ಗುಜರಾತ್ ಪ್ರವೇಶ ನಿಷೇಧಿಸಿದ್ದಾಗ, ಈಗಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಪ್ರಶ್ನಿಸಿದ್ದಾರೆ.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ‘ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿದ ಆರೋಪಕ್ಕೆ ಟ್ವೀಟ್‌ ಮಾಡಿರುವ ಸುಧಾಕರ್‌, ‘ಸಿಬಿಐ, ಇಡಿ, ಐಟಿ ಸ್ವತಂತ್ರ ಸ್ವಾಯತ್ತ ಸಂಸ್ಥೆಗಳಾಗಿದ್ದು ಸಹಜ ಕಾನೂನು ಪ್ರಕ್ರಿಯೆ ಪಾಲಿಸುವ ಮೂಲಕ ತಮ್ಮ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುವುದು ಸರಿಯಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಎಷ್ಟೇ ದೊಡ್ಡವರಾದರೂ ಕಾನೂನಿಗೆ ತಲೆ ಬಾಗಲೇ ಬೇಕು’ ಎಂದಿದ್ದಾರೆ.

ಇದನ್ನೂ ಓದಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.