ಬೆಂಗಳೂರು: ನವೆಂಬರ್ 23ರಂದು ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಸಮನ್ಸ್ ಜಾರಿಗೊಳಿಸಿದೆ.
ಅಕ್ಟೋಬರ್ 5 ರಂದು ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ್ದರು. ಜೊತೆಗೆ, ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು.
ಸಿಬಿಐ ಸಮನ್ಸ್ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್ 25ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.