ADVERTISEMENT

ಡ್ರಗ್ಸ್‌ ಪ್ರಕರಣ: ಇಂದ್ರಜಿತ್ ಲಂಕೇಶ್‌ ವಿಚಾರಣೆ ಇಂದು

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 1:25 IST
Last Updated 28 ಜನವರಿ 2021, 1:25 IST
ಇಂದ್ರಜಿತ್ ಲಂಕೇಶ್
ಇಂದ್ರಜಿತ್ ಲಂಕೇಶ್    

ಬೆಂಗಳೂರು: ಡ್ರಗ್ಸ್‌ ಜಾಲ ಪ್ರಕರಣದಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನು ಸಿಸಿಬಿ ಅಧಿಕಾರಿಗಳು ಮತ್ತೆ ವಿಚಾರಣೆ ನಡೆಸುವ ಸಾಧ್ಯತೆ ಇದೆ.

‘ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ನೀಡುವಂತೆ ಕೋರಿ, ಸಿಸಿಬಿ ಅಧಿಕಾರಿಗಳು ಇಂದ್ರಜಿತ್ ಲಂಕೇಶ್ ಅವರಿಗೆ ನೋಟಿಸ್ ನೀಡಿದ್ದು, ಸಿಸಿಬಿ ಕಚೇರಿಗೆ ಗುರುವಾರ (ಜ.28) ಬೆಳಿಗ್ಗೆ ಬರುವಂತೆ ತಿಳಿಸಲಾಗಿದೆ. ತನಿಖಾಧಿಕಾರಿ ಪುನೀತ್ ಕುಮಾರ್‌ ವಿಚಾರಣೆ ನಡೆಸಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಡ್ರಗ್ಸ್‌ ಪ್ರಕರಣದಲ್ಲಿ ಹಲವರು ಭಾಗಿಯಾಗಿದ್ದಾರೆ ಎಂದು ಇಂದ್ರಜಿತ್‌ ಹೇಳಿದ್ದರು. ಈ ಸಂಬಂಧಸಿಸಿಬಿ ಎರಡು ಬಾರಿ ವಿಚಾರಣೆಯೂ ನಡೆಸಿತ್ತು. ಆದರೆ, ಅಗತ್ಯ ಆಧಾರಗಳನ್ನು ಇಂದ್ರಜಿತ್‌ ನೀಡಿರಲಿಲ್ಲ. ಹಾಗಾಗಿ, ಮತ್ತೊಮ್ಮೆ ಹಾಜರಾಗಲು ಸಿಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.