ADVERTISEMENT

ಸಿ.ಡಿ: ಇ.ಡಿ.ಗೆ ಕಾಂಗ್ರೆಸ್ ದೂರು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2021, 16:24 IST
Last Updated 23 ಮಾರ್ಚ್ 2021, 16:24 IST

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾಗುತ್ತಿರುವ ಸಿ.ಡಿ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಣದ ವಹಿವಾಟಿನ ಕುರಿತು ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ಕಾಂಗ್ರೆಸ್‌ ದೂರು ನೀಡಿದೆ.

ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ವೈ. ಪುಟ್ಟರಾಜು ನೇತೃತ್ವದ ನಿಯೋಗ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕರ ಕಚೇರಿಗೆ ಮಂಗಳವಾರ ದೂರು ಸಲ್ಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 9ರಂದು ರಮೇಶ ಜಾರಕಿಹೊಳಿ ಅವರು ನಡೆಸಿದ್ದ ಸುದ್ದಿಗೋಷ್ಠಿಯ ರೆಕಾರ್ಡಿಂಗ್‌ ಇರುವ ಸಿ.ಡಿಯನ್ನೂ ದೂರಿನೊಂದಿಗೆ ನೀಡಿದೆ.

‘ಪ್ರಕರಣದಲ್ಲಿ ₹ 5 ಕೋಟಿಯಿಂದ ₹ 100 ಕೋಟಿಯವರೆಗೂ ಹಣದ ವಹಿವಾಟು ನಡೆದಿದೆ ಎಂದು ರಮೇಶ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಸಿ.ಡಿಯಲ್ಲಿರುವ ಮಹಿಳೆಗೆ ಎರಡು ಫ್ಲ್ಯಾಟ್‌ಗಳನ್ನು ಕೊಡಿಸಲಾಗಿದೆ ಎಂಬ ಆರೋಪವನ್ನೂ ಮಾಡಿದ್ದಾರೆ. ಈ ಎಲ್ಲ ವಿಚಾರಗಳ ಕುರಿತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.