ADVERTISEMENT

ಗ್ರಂಥಾಲಯಗಳಲ್ಲೇ ಆಕಾಶಕಾಯ ಕಲಿಕೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2025, 15:25 IST
Last Updated 3 ಜನವರಿ 2025, 15:25 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಗ್ರಾಮ ಪಂಚಾಯತಿ ಗ್ರಂಥಾಲಯ ಅರಿವು ಕೇಂದ್ರಗಳ ಮೂಲಕ ವಿದ್ಯಾರ್ಥಿಗಳಿಗೆ ಆಕಾಶಕಾಯಗಳ ಬಗ್ಗೆ ಮಾಹಿತಿ ನೀಡಲು ಖಗೋಳ ಭೌತಶಾಸ್ತ್ರ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಈ ಕುರಿತು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ನಿರ್ದೇಶಕಿ ಅನ್ನಪೂರ್ಣಿ ಸುಬ್ರಮಣ್ಯಂ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಆಯುಕ್ತೆ ಅರುಂಧತಿ ಚಂದ್ರಶೇಖರ್‌ ಈ ಕುರಿತ ಒಡಂಬಡಿಕೆಗೆ ಸಹಿ ಹಾಕಿದ್ದಾರೆ.

ADVERTISEMENT

ಮಾಹಿತಿ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಗ್ರಾಮೀಣಾಭಿವೃದ್ಧಿ ಇಲಾಖೆ ರಾಜ್ಯದಲ್ಲಿ 6 ಸಾವಿರ ಅರಿವು ಕೇಂದ್ರಗಳನ್ನು ನಿರ್ವಹಿಸುತ್ತಿದೆ. ಖಗೋಳ ಭೌತಶಾಸ್ತ್ರ ಸಂಸ್ಥೆ ಜತೆ ಮಾಡಿಕೊಂಡಿರುವ ಒಪ್ಪಂದದಂತೆ ವಿಜ್ಞಾನ ಸಾಕ್ಷರತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಮೇಲ್ವಿಚಾರಕರಿಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುವುದು. ಕನ್ನಡದಲ್ಲಿ ಖಗೋಳ ಸಂಪನ್ಮೂಲಗಳ ರಚನೆ ಮತ್ತು ಆಕಾಶಕಾಯಗಳ ಘಟನೆಗಳ ಸುತ್ತ ಸಾರ್ವಜನಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದಿದ್ದಾರೆ.

ಬರಿಗಣ್ಣಿನಿಂದ ನೋಡಬಹುದಾದ ಖಗೋಳ ಘಟನೆಗಳ ಬಗ್ಗೆ ಮತ್ತು ಖಗೋಳದ ವಿವರಗಳನ್ನು ಕನ್ನಡದಲ್ಲಿ ಒದಗಿಸಲು ಅನುವು ಮಾಡಿಕೊಡಲಾಗುತ್ತದೆ. ಅರಿವು ಕೇಂದ್ರಗಳಲ್ಲಿನ ಕಂಪ್ಯೂಟರ್‌ ಪ್ರಯೋಗಾಲಯಗಳ ಮೂಲಕ ಚರ್ಚೆ ಹಾಗೂ ಸ್ಪರ್ಧೆಗಳ ಆಯೋಜನೆ, ಆನ್‌ಲೈನ್‌ ಸಂವಹನ, ಸಣ್ಣ ದೂರದರ್ಶಕಗಳ ಬಳಕೆಗೆ ಆದ್ಯತೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.