ADVERTISEMENT

ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2018, 9:55 IST
Last Updated 12 ನವೆಂಬರ್ 2018, 9:55 IST
   

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ‍ ವ್ಯಕ್ತಪಡಿಸಿದ್ದಾರೆ.

ರಾಜಕಾರಣ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು. ಸ್ನೇಹಕ್ಕೆ ಅತ್ಯಂತ ಮಹತ್ವ ನೀಡುತ್ತಿದ್ದ ವ್ಯಕ್ತಿ ಅವರಾಗಿದ್ದರು. ಇಂದು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

‘ಮೌಲ್ಯಾಧಾರಿತ ರಾಜಕಾರಣದಲ್ಲಿ ನಂಬಿಕೆಯಿಟ್ಟಿದ್ದ ಅವರು ಸಂಸದರಾಗಿ, ಕೇಂದ್ರ ಸಚಿವರಾಗಿ ದೇಶಕ್ಕೆ ನೀಡಿದ ಕೊಡುಗೆ ಆನನ್ಯವಾದದ್ದು. ತಮ್ಮ ಜನಪರ ಕಾಳಜಿ, ಕಾರ್ಯಚಟುವಟಿಕೆಗಳಿಂದಾಗಿ ಬೆಂಗಳೂರಿಗರ ಕಣ್ಮಣಿ ಆಗಿದ್ದರು’ಎಂದು ಸ್ಮರಿಸಿದ್ದಾರೆ.

ADVERTISEMENT

‘ಭಗವಂತಅವರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲಿ. ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದರು.

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.