ADVERTISEMENT

ಮಂಡ್ಯ ಕ್ರೀಡಾ ಸೌಲಭ್ಯಕ್ಕೆ ಕೇಂದ್ರ ಸರ್ಕಾರದಿಂದ ₹14 ಕೋಟಿ ಮಂಜೂರು

​ಪ್ರಜಾವಾಣಿ ವಾರ್ತೆ
Published 10 ಜನವರಿ 2026, 20:49 IST
Last Updated 10 ಜನವರಿ 2026, 20:49 IST
<div class="paragraphs"><p>ಹಣ </p></div>

ಹಣ

   

ಸಾಂದರ್ಭಿಕ ಚಿತ್ರ

ನವದೆಹಲಿ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕ್ರೀಡಾ ಮೂಲಸೌಕರ್ಯ ಕಲ್ಪಿಸುವ ಉದೇಶಕ್ಕಾಗಿ ಕೇಂದ್ರ ಸರ್ಕಾರವು ₹14 ಕೋಟಿ ಮಂಜೂರು ಮಾಡಿದೆ.

ADVERTISEMENT

ಜಿಲ್ಲೆಯಲ್ಲಿ ಕ್ರೀಡಾ ಸೌಕರ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಪತ್ರ ಬರೆದು ವಿನಂತಿಸಿದ್ದರು. ಮನವಿಗೆ ಸ್ಪಂದಿಸಿರುವ ಕ್ರೀಡಾ ಸಚಿವರು, ಖೇಲೋ ಇಂಡಿಯಾ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಬಹುಪಯೋಗಿ ಕ್ರೀಡಾ ಸೌಲಭ್ಯ ನಿರ್ಮಾಣಕ್ಕೆ ಹಣ ಮಂಜೂರು ಮಾಡಿದ್ದಾರೆ.

ಈ ಅನುದಾನದಲ್ಲಿ ಮಂಡ್ಯದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬಹುಪಯೋಗಿ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಬಹುಪಯೋಗಿ ಕ್ರೀಡಾ ಸೌಲಭ್ಯಕ್ಕೆ ಅನುಮೋದನೆ ದೊರೆತಿರುವುದರಿಂದ ಮಂಡ್ಯ ಕ್ರೀಡಾ ಅಭಿವೃದ್ಧಿ ಮತ್ತು ಉತ್ತೇಜನದಲ್ಲಿ ಹೊಸ ಯುಗಕ್ಕೆ ನಾಂದಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದ ಕೇಂದ್ರ ಸಚಿವರು; ಈ ಕ್ರೀಡಾ ಸಮುಚ್ಚಯದಲ್ಲಿ ಯುವ ಕ್ರೀಡಾಪಟುಗಳ ತರಬೇತಿ, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸುವುದು, ಸಾರ್ವಜನಿಕರಲ್ಲಿ ಫಿಟ್‌ನೆಸ್ ಅನ್ನು ಉತ್ತೇಜಿಸುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.