ADVERTISEMENT

ತಿಪಟೂರು: ಎನ್‌ಎಚ್‌ 206ರ ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ನವೆಂಬರ್ 2022, 10:57 IST
Last Updated 2 ನವೆಂಬರ್ 2022, 10:57 IST
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ   

ಬೆಂಗಳೂರು: ತಿಪಟೂರು ರಾಷ್ಟ್ರೀಯ ಹೆದ್ದಾರಿ 206ರ ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರಒಪ್ಪಿಗೆ ನೀಡಿದೆ.

ದ್ವಿಪಥದಿಂದ ಚತುಷ್ಪಥ ರಸ್ತೆಯಾಗಿ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ತಿಪಟೂರಿನ ಕೋಡಿ ಸರ್ಕಲ್‌ನಿಂದ ಹುಚ್ಚಗೊಂಡನಹಳ್ಳಿ ಬೈಪಾಸ್ ತನಕ 4 ಲೇನ್ ನಿರ್ಮಾಣ ಮಾಡಲಾಗುವುದು. ₹32.50 ಕೋಟಿ ವೆಚ್ಚದಲ್ಲಿ‌ ರಸ್ತೆ ಅಗಲೀಕರಣ ಮಾಡಲಾಗುವುದು’ ಎಂದು ಬರೆದುಕೊಂಡಿದ್ದಾರೆ.

ADVERTISEMENT

206 ಸಂಖ್ಯೆಯ ರಾಷ್ಟ್ರೀಯ ಹೆದ್ದಾರಿಯು ಆಂಧ್ರ ಪ್ರದೇಶದ ಚಿತ್ತೂರಿನಿಂದ ತುಮಕೂರು ಜಿಲ್ಲೆಯ ತಿಪಟೂರು, ಶಿರಾ, ಕಡೂರು, ಶಿವಮೊಗ್ಗ, ಶಿರಸಿ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರವನ್ನು ಸಂಪರ್ಕಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.