ADVERTISEMENT

ಲೋಕಪಾಲ್‌ ಕಾಯ್ದೆ ಜಾರಿಗೆ ಕೇಂದ್ರದ ನಿರಾಸಕ್ತಿ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2018, 19:30 IST
Last Updated 15 ಆಗಸ್ಟ್ 2018, 19:30 IST

ಚಿತ್ರದುರ್ಗ: ಲೋಕಪಾಲ್‌ ಕಾಯ್ದೆಯನ್ನು ಪ್ರಸ್ತುತ ಕೇಂದ್ರ ಸರ್ಕಾರ ತನ್ನ ಅವಧಿ ಮುಗಿಯುತ್ತಾ ಬಂದರೂ ಜಾರಿಗೊಳಿಸಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‍ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವ ಪಕ್ಷಕ್ಕೂ ಒಂದು ಬಲಿಷ್ಠ ಲೋಕಾಯುಕ್ತ ಸಂಸ್ಥೆ ಬೇಡವಾಗಿದೆ. ಲೋಕಾಯುಕ್ತದಿಂದ ನಿವೃತ್ತಿಯಾದ ನಂತರ ಆ ಸ್ಥಾನಕ್ಕೆ ಭಾಸ್ಕರ್ ರಾವ್ ಎಂಬುವರನ್ನು ಕೂರಿಸಿ ಸಂಸ್ಥೆಯ ಬಗ್ಗೆ ಜನರಲ್ಲಿ ಇದ್ದಂತಹ ಅಭಿಮಾನವನ್ನು ಕೆಳಮಟ್ಟಕ್ಕೆ ತರಲು ಪ್ರಯತ್ನಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT