ADVERTISEMENT

ಮಸೀದಿಗಳಲ್ಲಿ ಧ್ವನಿವರ್ಧಕ: ಕಾನೂನು ಕೈಗೆತ್ತಿಕೊಳ್ಳಬಾರದು-ಸಚಿವ ಪ್ರಲ್ಹಾದ ಜೋಶಿ

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಗಡುವು

​ಪ್ರಜಾವಾಣಿ ವಾರ್ತೆ
Published 8 ಮೇ 2022, 19:14 IST
Last Updated 8 ಮೇ 2022, 19:14 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಮಾಡುತ್ತದೆ. ಬೇರೆಯವರು ಸರ್ಕಾರದ ಕೆಲಸ ಮಾಡುವ ಅಗತ್ಯವಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT