ADVERTISEMENT

ಉದ್ದು, ಸೋಯಾಬಿನ್ ಖರೀದಿಗೆ ಕೇಂದ್ರ ಅನುಮತಿ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 15:47 IST
Last Updated 30 ಆಗಸ್ಟ್ 2024, 15:47 IST
<div class="paragraphs"><p>ಸೋಯಾಬಿನ್</p></div>

ಸೋಯಾಬಿನ್

   

ನವದೆಹಲಿ: ಬೆಂಬಲ ಬೆಲೆ ಯೋಜನೆಯಡಿ ಉದ್ದು ಹಾಗೂ ಸೋಯಾಬಿನ್‌ ಖರೀದಿಗೆ ಕೇಂದ್ರ ಕೃಷಿ ಸಚಿವಾಲಯ ಅನುಮತಿ ನೀಡಿದೆ. 

ನಾಲ್ಕೈದು ದಿನಗಳ ಹಿಂದೆ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಅನುಮತಿ ನೀಡಿತ್ತು. ರಾಜ್ಯದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಟನ್ ಉದ್ದು ಹಾಗೂ 1,03,315 ಟನ್ ಸೋಯಾಬಿನ್ ಖರೀದಿಗೆ ಒಪ್ಪಿಗೆ ನೀಡಿದೆ. 

ADVERTISEMENT

ಉದ್ದಿನ ಕಾಳು ₹7,400 ಮತ್ತು ಸೋಯಾಬಿನ್‌ಗೆ ₹4,892 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.  ಕಳೆದ ವರ್ಷ ₹6,950 ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ₹450 ಹೆಚ್ಚಳ ಕಂಡಿದೆ. ₹4,600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ ₹292 ಹೆಚ್ಚಳವಾಗಿದೆ.

ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತಕ್ಷಣವೇ ರಾಜ್ಯದಾದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.