ಕಲಬುರ್ಗಿ: ಆಳಂದ ತಾಲ್ಲೂಕಿನ ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರವೇಶಕ್ಕೆ ಪ್ರಸಕ್ತ ಶೈಕ್ಷಣಿಕ ಸಾಲಿಗೆ 860 ಸೀಟುಗಳಿದ್ದು,70 ಸಾವಿರ ಅರ್ಜಿ ಸಲ್ಲಿಕೆಯಾಗಿವೆ.
‘ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಮ್ಮ ವಿಶ್ವವಿದ್ಯಾಲಯಗಿಂತ ಅಂದಾಜು 4 ಸಾವಿರ ಅರ್ಜಿಗಳು ಹೆಚ್ಚು ಸಲ್ಲಿಕೆಯಾಗಿವೆ. ಆ ವಿಶ್ವವಿದ್ಯಾಲಯಕ್ಕೆ ಹೋಲಿಸಿದರೆ ನಮ್ಮಲ್ಲಿರುವ ವಿಭಾಗಗಳು ಕಡಿಮೆ. ಇಲ್ಲಿ 28 ವಿಭಾಗಗಳಿವೆ. ಆದರೂ ವಿದ್ಯಾರ್ಥಿಗಳು ಇಲ್ಲಿ ಪ್ರವೇಶ ಪಡೆಯಲು ಒಲವು ತೋರುತ್ತಿರುವುದು ಒಳ್ಳೆಯ ಬೆಳವಣಿಗೆ’ ಎಂದು ಕುಲಪತಿ ಪ್ರೊ.ಎಚ್.ಎಂ.ಮಹೇಶ್ವರಯ್ಯ ಹೇಳಿದ್ದಾರೆ.
‘ನಮ್ಮ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದು ಹೋದ ವಿದ್ಯಾರ್ಥಿಗಳು ಇಲ್ಲಿನ ಗುಣಮಟ್ಟದ ಬೋಧನೆಯ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ಇದು ಕೂಡ ಪ್ರವೇಶಕ್ಕೆ ಹೆಚ್ಚು ಅರ್ಜಿಗಳು ಬರಲು ಕಾರಣ. ಅಲ್ಲದೆ, ವಿಶ್ವವಿದ್ಯಾಲಯಲ್ಲಿ ಶೇ 48ರಷ್ಟು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವುದು ವಿಶೇಷ’ ಎಂದು ಅವರು ತಿಳಿಸಿದ್ದಾರೆ.
‘ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶ ಪರೀಕ್ಷಾ (ಸಿಯು ಸಿಇಟಿ) ಪದ್ಧತಿ ಅಳವಡಿಸಿಕೊಳ್ಳಲಾಗಿದೆ. ಈ ಪರೀಕ್ಷೆಸೆ.18ರಿಂದ ದೇಶದ 142 ಕೇಂದ್ರಗಳಲ್ಲಿ ಆರಂಭವಾಗಿದ್ದು, ಸೆ.20ರವರೆಗೆ ನಡೆದವು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.