ADVERTISEMENT

ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿಯ ಯೋಜನೆಗಳ ಸುಲಭ ಅನುಮತಿಗೆ ಮಾರ್ಗಸೂಚಿ: ಕೇಂದ್ರ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 15:49 IST
Last Updated 13 ಫೆಬ್ರುವರಿ 2026, 15:49 IST
<div class="paragraphs"><p>ಮೇಕೆದಾಟು ಪ್ರದೇಶ</p></div>

ಮೇಕೆದಾಟು ಪ್ರದೇಶ

   

ನವದೆಹಲಿ: ಮೇಕೆದಾಟು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ನೀರಾವರಿ ಯೋಜನೆಗಳ ಅನುಮೋದನೆ ಪ್ರಕ್ರಿಯೆ ಸುಗಮಗೊಳಿಸಲು ಕೇಂದ್ರ ಜಲ ಆಯೋಗ ಮಾರ್ಗಸೂಚಿ ಹೊರಡಿಸಿದೆ. 

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆಯೇ ಎಂದು ತಮಿಳುನಾಡಿನ ಸಂಸದೆ ಸುಧಾ ಆರ್‌. ಕೇಳಿರುವ ಪ್ರಶ್ನೆಗೆ ಲೋಕಸಭೆಯಲ್ಲಿ ಉತ್ತರ ನೀಡಿರುವ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್‌ ಭೂಷಣ್‌ ಚೌಧರಿ, ‘ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೆರಿ ರಾಜ್ಯಗಳ ವ್ಯಾಪ್ತಿಯ ಯೋಜನೆಗಳ ಮೌಲ್ಯಮಾಪನಕ್ಕಾಗಿ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ’ ಎಂದರು. 

ADVERTISEMENT

‘ಮೌಲ್ಯಮಾಪನಕ್ಕಾಗಿ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಜಲ ಆಯೋಗ ಸ್ವೀಕರಿಸಿದೆ. ಯೋಜನೆ ಅನುಷ್ಠಾನಗೊಳಿಸುವ ಮೊದಲು ಕರ್ನಾಟಕ ಸರ್ಕಾರವು ಸಂಬಂಧಪಟ್ಟ ಇಲಾಖೆಗಳಿಂದ ಪರಿಸರ ಅನುಮತಿ ಸೇರಿದಂತೆ ಎಲ್ಲ ಶಾಸನಬದ್ಧ ಅನುಮೋದನೆಗಳನ್ನು ಪಡೆಯಬೇಕು’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.