ADVERTISEMENT

ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ ₹273 ಕೋಟಿ: ಕೇಂದ್ರ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2023, 12:40 IST
Last Updated 10 ಜೂನ್ 2023, 12:40 IST
ಹುಬ್ಬಳ್ಳಿ ವಿಮಾನ ನಿಲ್ದಾಣ
ಹುಬ್ಬಳ್ಳಿ ವಿಮಾನ ನಿಲ್ದಾಣ   

ನವದೆಹಲಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ₹273 ಕೋಟಿ ವೆಚ್ಚದಲ್ಲಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 

ಈ ಸಂಬಂಧ ಟ್ವೀಟ್‌ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ‘ಹೊಸ ಟರ್ಮಿನಲ್‌ 20 ಸಾವಿರ ಚದರ ಮೀಟರ್‌ (ನೆಲ ಮಹಡಿ ಹಾಗೂ ಮೊದಲ ಮಹಡಿ) ವಿಸ್ತೀರ್ಣ ಇರಲಿದೆ’ ಎಂದು ತಿಳಿಸಿದ್ದಾರೆ. 

ದಟ್ಟಣೆಯ ಅವಧಿಯಲ್ಲಿ ಗರಿಷ್ಠ 1400 ಪ್ರಯಾಣಿಕರ (700 ಆಗಮನ ಹಾಗೂ 700 ನಿರ್ಗಮನ) ನಿರ್ವಹಣೆ ಮಾಡುವ ರೀತಿಯಲ್ಲಿ ಈ ಟರ್ಮಿನಲ್‌ ನಿರ್ಮಾಣ ಮಾಡಲಾಗುತ್ತದೆ. ವಿಸ್ತರಣಾ ಯೋಜನೆಯಿಂದ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ADVERTISEMENT

ವಿಸ್ತರಣಾ ಕಾಮಗಾರಿಯು 2024ರ ಜನವರಿಯಲ್ಲಿ ಆರಂಭಗೊಂಡು ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.