ADVERTISEMENT

ಸಿಇಟಿ: 30ಕ್ಕೆ ಸೀಟು ಹಂಚಿಕೆ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 18:59 IST
Last Updated 20 ಜೂನ್ 2019, 18:59 IST
   

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌, ಕೃಷಿ ವಿಜ್ಞಾನ (ಕೃಷಿ, ಪಶು) ಕೋರ್ಸ್‌ಗಳ ಪ್ರವೇಶಕ್ಕಾಗಿ ಆನ್‌ಲೈನ್‌ನಲ್ಲಿಐಚ್ಛಿಕ ಆಯ್ಕೆ ಪ್ರಕ್ರಿಯೆ ಶುಕ್ರವಾರದಿಂದ ಜೂನ್‌ 25ರವರೆಗೆ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ನಡೆಯಲಿದೆ.

ಜೂನ್‌ 27ರಂದು ಸಂಜೆ 6ರ ಬಳಿಕ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದೆ. 27ರಂದು ರಾತ್ರಿ 8 ಗಂಟೆಯಿಂದ 29ರ ಬೆಳಿಗ್ಗೆ 11ರವರೆಗೆ ಆಯ್ಕೆಗಳನ್ನು ಬದಲಾಯಿಸಲು ಅವಕಾಶ ಇದೆ. 30ರಂದು ಸಂಜೆ 6 ಗಂಟೆಯ ನಂತರ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT