ADVERTISEMENT

cet exam 2021: ಆ.28-30ರ ವರೆಗೆ 530 ಕೇಂದ್ರಗಳಲ್ಲಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2021, 1:53 IST
Last Updated 27 ಆಗಸ್ಟ್ 2021, 1:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಇದೇ 28ರಿಂದ 30ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ರಾಜ್ಯದ 530 ಕೇಂದ್ರಗಳಲ್ಲಿ ನಡೆಯಲಿದೆ.

‘ಒಟ್ಟು 2,01,816 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, ಕೋವಿಡ್ ಗಮನದಲ್ಲಿರಿಸಿಕೊಂಡು ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ
ನಾರಾಯಣ ಹೇಳಿದ್ದಾರೆ.

28ರಂದು ಜೀವವಿಜ್ಞಾನ ಮತ್ತು ಗಣಿತ, 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ ಆರು ಸ್ಥಳಗಳಲ್ಲಿ ಇದೇ 30ರಂದು ಕನ್ನಡ ಪರೀಕ್ಷೆ ನಡೆಯಲಿದೆ.

ADVERTISEMENT

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಗೆ 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.