ADVERTISEMENT

ಸಿಇಟಿ: ಎಂಜನಿಯರಿಂಗ್‌- 1.35 ಲಕ್ಷ ಸೀಟುಗಳು ಲಭ್ಯ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 16:18 IST
Last Updated 13 ಜೂನ್ 2025, 16:18 IST
<div class="paragraphs"><p>ಕೆಇಎ</p></div>

ಕೆಇಎ

   

ಬೆಂಗಳೂರು: ಸಿಇಟಿಯಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ 2025–26ನೇ ಸಾಲಿನಲ್ಲಿ ಎಂಜಿನಿಯರಿಂಗ್‌ ಪ್ರವೇಶಕ್ಕೆ 1.35 ಲಕ್ಷ ಸೀಟುಗಳು ಲಭ್ಯವಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಸುಮಾರು 6,000 ಸೀಟುಗಳು ಕಡಿಮೆಯಾಗಿವೆ. 

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ವಿವಿಧ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ 64,047 ಸೀಟುಗಳೂ ಸೇರಿ 1,35,969 ಸೀಟುಗಳ ಕರಡು ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಕಳೆದ ವರ್ಷ ಎಂಜಿನಿಯರಿಂಗ್‌ ಸೀಟುಗಳ ಸಂಖ್ಯೆ 1.41 ಲಕ್ಷ ಇತ್ತು. 

ADVERTISEMENT

ಕರಡು ಪಟ್ಟಿಯಲ್ಲಿ ಕಂಪ್ಯೂಟರ್‌ ಸೈನ್ಸ್‌ ಸೀಟುಗಳನ್ನು ಕಡಿಮೆ ಮಾಡಲಾಗಿದೆ. ಕಂಪ್ಯೂಟರ್ ಸೈನ್ಸ್‌ಗೆ ಒಟ್ಟು 33,813 ಸೀಟುಗಳು ಲಭ್ಯವಿದ್ದು, ಅವುಗಳಲ್ಲಿ 15,754 ಸೀಟುಗಳನ್ನು ಕೆಇಎ ಭರ್ತಿ ಮಾಡುತ್ತದೆ. 2024ರಲ್ಲಿ ಕಂಪ್ಯೂಟರ್ ಸೈನ್ಸ್‌ಗೆ ಒಟ್ಟು 35,013 ಸೀಟುಗಳು ಲಭ್ಯವಾಗಿದ್ದವು. 

ಸೀಟುಗಳನ್ನು ಸೇರಿಸಲು ಅಥವಾ ಅಳಿಸಲು ಕಾಲೇಜುಗಳಿಗೆ ಏಳು ದಿನಗಳ ಕಾಲಾವಕಾಶ ನೀಡಲಾಗಿದೆ. ಅನುದಾನಿತ ಕಾಲೇಜುಗಳು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಿಂದ (ಎಐಸಿಟಿಇ) ವಿಸ್ತರಣೆಯ ಅನುಮತಿ ಪಡೆಯದೇ ಇರುವುದು. ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸುವ ಲೋಪಗಳ ಕಾರಣ ಸೀಟುಗಳ ಸಂಖ್ಯೆಯಲ್ಲಿ ವ್ಯತ್ಯಾಸವಾಗಿರಬಹುದು. ಅಂತಿಮ ಪಟ್ಟಿ ಬಿಡುಗಡೆಯ ನಂತರ ಈ ಸಂಖ್ಯೆಯಲ್ಲಿ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.