ADVERTISEMENT

ಸಿಇಟಿ: ಅರ್ಜಿ ಸಲ್ಲಿಕೆಗೆ ಏ.5ರವರೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 20:31 IST
Last Updated 1 ಮಾರ್ಚ್ 2023, 20:31 IST
   

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಮೇ 20 ಹಾಗೂ 21ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಬಿಡುಗಡೆ ಮಾಡಿದೆ.

ಮೇ 20ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ, 21ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ವಿಷಯದ ಪರೀಕ್ಷೆಗಳು ನಡೆಯಲಿವೆ. ಪ್ರತಿ ಪತ್ರಿಕೆಯೂ ತಲಾ 60 ಅಂಕಗಳನ್ನು ಒಳಗೊಂಡಿರುತ್ತದೆ.

22ರಂದು ಬೆಳಿಗ್ಗೆ 11.30ರಿಂದ 12.30ರವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಸಿಇಟಿಗೆ ಹಾಜರಾಗುವ ಅಭ್ಯರ್ಥಿಗಳು ಮಾ.2ರಿಂದಲೇ ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏ.5,
ಶುಲ್ಕ ಪಾವತಿಗೆ ಏ.7 ಕೊನೆ ದಿನ. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿದ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ನೋಂದಣಿ ಸಂಖ್ಯೆ ನಮೂದಿಸಬೇಕು. ಸಂದೇಹಗಳಿದ್ದರೆ ಪ್ರಾಧಿಕಾರದ keaugcet2023@gmail.com ಗೆ ಇಮೇಲ್‌ ಕಳುಹಿಸಬಹುದು ಎಂದು ಕೆಇಎ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.