ADVERTISEMENT

ಸಿಇಟಿ ಪರೀಕ್ಷೆ: ಮರು ಪರಿಶೀಲನೆಗೆ ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 8:32 IST
Last Updated 28 ಜುಲೈ 2020, 8:32 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಜುಲೈ 30 ಮತ್ತು 31ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸುವ ಸಂಬಂಧ ಮರು ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 6 ಸಾವಿರಕ್ಕೂ ಹೆಚ್ಚು ಕಂಟೈನ್‌ಮೆಂಟ್ ವಲಯಗಳಿವೆ. ಈ ಸಂದರ್ಭದಲ್ಲಿ ಪರೀಕ್ಷೆ ನಡೆಸಿದರೆವಿದ್ಯಾರ್ಥಿಗಳು ಪರೀಕ್ಷೆಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಸರ್ಕಾರ ತನ್ನ ನಿರ್ಧಾರವನ್ನು ಬುಧವಾರ ಮಧ್ಯಾಹ್ನ 2.30ರೊಳಗೆ ತಿಳಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.

ಒಟ್ಟು 1,94,356 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು,120 ಸ್ಥಳಗಳ 497 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.