ADVERTISEMENT

ಸಿಇಟಿ: ಶುಲ್ಕ ಪಾವತಿಗೆ ಕೊನೆಯ ಅವಕಾಶ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2024, 16:27 IST
Last Updated 10 ಏಪ್ರಿಲ್ 2024, 16:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಿಇಟಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಶುಲ್ಕ ಪಾವತಿಸದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಂದು ಅವಕಾಶ ನೀಡಿದೆ.

ಇದುವರೆಗೂ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳು ಏ.10ರ ಬೆಳಿಗ್ಗೆಯಿಂದ ಏ.12ರ ಸಂಜೆ 5ರ ಒಳಗೆ ಶುಲ್ಕ ಪಾವತಿಸಬಹುದು. 'ಕಾರ್ಯ ನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ–ಬೆಂಗಳೂರು' ಇವರ ಹೆಸರಿಗೆ ₹600 ಮೊತ್ತದ ಡಿಡಿ ತೆಗೆಸಿಕೊಂಡು, ಸಿಇಟಿ ಅರ್ಜಿ ನಮೂನೆ ಸಹಿತ ಪ್ರಾಧಿಕಾರದ ಕಚೇರಿಗೆ ಖುದ್ದಾಗಿ ಹಾಜರಾಗಬಹುದು ಎಂದು ಪ್ರಾಧಿಕಾರ ಹೇಳಿದೆ.

ಅರ್ಜಿಯಲ್ಲಿ ಕೆಲವರು ಕೇವಲ ನೀಟ್‌ ಆಯ್ಕೆ ಮಾಡಿಕೊಂಡಿದ್ದು, ಅಂತಹವರು ಸಿಇಟಿ ಆಯ್ಕೆ ಮಾಡಿಕೊಳ್ಳಲು ಏ.12ರ ಸಂಜೆ 5ರ ಒಳಗೆ ಪ್ರಾಧಿಕಾರಕ್ಕೆ ಹಾಜರಾಗಿ ಅರ್ಜಿ ಸಲ್ಲಿಸಬಹುದು. ಹೀಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರಾಜ್ಯದ ಯಾವುದೇ ಭಾಗದಲ್ಲಿ ಖಾಲಿ‌ ಇರುವ ಪರೀಕ್ಷಾ ಕೇಂದ್ರಗಳಲ್ಲಿ ಅವಕಾಶ ಕೊಡಲಾಗುತ್ತದೆ ಎಂದು ಕೆಇಎ ಮಾಹಿತಿ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.