ಕೆಇಎ
ಬೆಂಗಳೂರು: ಯುಜಿಸಿಇಟಿ/ಯುಜಿನೀಟ್-25 ಕೌನ್ಸೆಲಿಂಗ್ ಕುರಿತು ದೂರದರ್ಶನದ ಚಂದನ ವಾಹಿನಿಯಲ್ಲಿ ಸೋಮವಾರ (ಜು.21) ಸಂಜೆ 7.30ರಿಂದ 8.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ, ವೈದ್ಯಕೀಯ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಶ್ರೀನಿವಾಸ, ಕೆಇಎ ಅಧಿಕಾರಿ ಶ್ರೀನಾಥ ಅವರು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.
ಫೋನ್ ಸಂಖ್ಯೆ 080-23532599/ 080-23532699 ಗೆ ಕರೆ ಮಾಡಿ ಅನುಮಾನಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.