ADVERTISEMENT

ಸಿಇಟಿ: ಸಮಿತಿ ರಚನೆ ಪ್ರಶ್ನಿಸಿದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 16:21 IST
Last Updated 15 ಜುಲೈ 2024, 16:21 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ‘ಕರ್ನಾಟಕ ಸಿಇಟಿ ಪರೀಕ್ಷೆಗಳಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ’ ಎಂಬ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸುವ ನಿರ್ಧಾರದ ಸಿಂಧುತ್ವ ಪರಿಶೀಲನೆ ಕೋರಿಕೆಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.

ಈ ಸಂಬಂಧ ದಾಸರಹಳ್ಳಿಯ ಯು.ತನ್ಮಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಯಾವುದೇ ನಿರ್ದೇಶನ ನೀಡುವುದು ಪ್ರಾಯೋಗಿಕ ಎನಿಸುವುದಿಲ್ಲ’ ಎಂದು ಅಭಿಪ್ರಾಯದೊಂದಿಗೆ ಅರ್ಜಿದಾರರ ಮನವಿ ಮಾನ್ಯ ಮಾಡಲು ನಿರಾಕರಿಸಿದೆ.

ADVERTISEMENT

‘ಸರ್ಕಾರದ ನಿರ್ಧಾರ ತಜ್ಞರ ಅಭಿಪ್ರಾಯದಿಂದ ರೂಪುಗೊಂಡಿದೆ. ಹೀಗಾಗಿ, ಕೋರ್ಟ್‌ ಇದರಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಸೂಚಿಸಿದೆ.

‘ಕಳೆದ ಏಪ್ರಿಲ್‌ನಲ್ಲಿ ನಡೆಸಲಾಗಿದ್ದ ಸಿಇಟಿ ಪರೀಕ್ಷೆಯಲ್ಲಿ ಸುಮಾರು ಮೂರು ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪರೀಕ್ಷೆಯಲ್ಲಿ, ಸಿಇಟಿ ಪಠ್ಯಕ್ರಮದ ಹೊರತಾದ ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ’ ಎಂಬ ಪೋಷಕರು ಮತ್ತು ಶಿಕ್ಷಕರ ದೂರಿನ ಹಿನ್ನೆಲೆಯಲ್ಲಿ ಸರ್ಕಾರ ಸಮಿತಿ ರಚನೆ ನಿರ್ಧಾರ ಕೈಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.