ಬೆಂಗಳೂರು: ‘ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶುಕ್ರವಾರ (ಆಗಸ್ಟ್ 21) ಪ್ರಕಟವಾಗಲಿದೆ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
‘ಫಲಿತಾಂಶವನ್ನು ಗುರುವಾರ (ಆ. 20) ಪ್ರಕಟಿಸಲಾಗುವುದು ಎಂದು ಈ ಹಿಂದೆ ಪ್ರಕಟಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಒಂದು ದಿನ ಮುಂದೂಡಲಾಗಿದೆ’ ಎಂದರು.
ಬೆಳಿಗ್ಗೆ 11 ಗಂಟೆಗೆ ಅಶ್ವತ್ಥನಾರಾಯಣ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸಾರ್ವಜನಿಕವಾಗಿ ಫಲಿತಾಂಶ ಲಭ್ಯವಾಗುವಂತೆ ಮಾಡಲಿದೆ.
ಫಲಿತಾಂಶ ವೀಕ್ಷಿಸಲು ಈ ಲಿಂಕ್ ಕ್ಲಿಕ್ಕಿಸಿ:http://karresults.nic.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.