ADVERTISEMENT

ಸೆಪ್ಟೆಂಬರ್ 20ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಸಿ.ಎನ್. ಅಶ್ವತ್ಥ ನಾರಾಯಣ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 19:31 IST
Last Updated 3 ಸೆಪ್ಟೆಂಬರ್ 2021, 19:31 IST
ಡಾ.ಸಿ.ಎನ್. ಅಶ್ವತ್ಥ ನಾರಾಯಣ
ಡಾ.ಸಿ.ಎನ್. ಅಶ್ವತ್ಥ ನಾರಾಯಣ   

ಬೆಂಗಳೂರು: ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇದೇ 20ರಂದು ಪ್ರಕಟವಾಗಲಿದೆ.

‘ಅ.1ರವರೆಗೆ ವೃತ್ತಿಪರ ಕೋರ್ಸ್‌ ಪದವಿ ಪ್ರವೇಶಕ್ಕೆ ಅವಕಾಶವಿದೆ. ಎಂಜಿನಿಯರಿಂಗ್‌ ಕೋರ್ಸ್‌ಗಳ ಶುಲ್ಕದ ಬಗ್ಗೆ ಮುಂದಿನ ವಾರ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಶುಕ್ರವಾರ ತಿಳಿಸಿದರು.

‘ಫಲಿತಾಂಶ ಪ್ರಕಟವಾದ ನಂತರ ನಿಗದಿತ ವೇಳಾಪಟ್ಟಿಯಂತೆ ಕೌನ್ಸೆಲಿಂಗ್‌ ನಡೆಸಲಾಗುವುದು. ಶೈಕ್ಷಣಿಕ ವರ್ಷ ಆರಂಭ ಹೆಚ್ಚು ವಿಳಂಬವಾಗಲು ಬಿಡುವುದಿಲ್ಲ’ ಎಂದೂ ಹೇಳಿದರು.

ADVERTISEMENT

‘ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ಈ ಬಗ್ಗೆ ದೂರುಗಳು ಬಂದರೆ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದೂ ಅವರು ಎಚ್ಚರಿಸಿದರು.

ಫಲಿತಾಂಶಕ್ಕಾಗಿ https://cetonline.karnataka.gov.in ವೆಬ್‌ಸೈಟ್‌ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.