ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
ಬೆಂಗಳೂರು: ‘ನೋಂದಣಿ ಸಂಖ್ಯೆ ಸರಿಯಾಗಿ ನಮೂದಿಸದ ಕಾರಣಕ್ಕೆ ಸಿಇಟಿ-2025ರ ಫಲಿತಾಂಶ ತಡೆಹಿಡಿಯಲಾಗಿರುವ ಅಭ್ಯರ್ಥಿಗಳು, ಮೇ 26ರಿಂದ ಆನ್‌ಲೈನ್‌ಲ್ಲಿ ಅಂಕ ನಮೂದಿಸಲು ಅವಕಾಶ ನೀಡಲಾಗುವುದು’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದರು.
‘ಸುಮಾರು 10 ಸಾವಿರ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆಯನ್ನು ಸರಿಯಾಗಿ ನಮೂದಿಸದ ಕಾರಣ ಅವರು ದ್ವಿತೀಯ ಪಿಯುನಲ್ಲಿ ಗಳಿಸಿದ ಅಂಕಗಳನ್ನು ನೇರವಾಗಿ ಪಡೆಯಲು ಸಾಧ್ಯವಾಗಿಲ್ಲ. ಅಂತಹ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿಲ್ಲ’ ಎಂದು ವಿವರಿಸಿದರು.
‘ಮೇ 26ರಿಂದ ತೆರೆಯಲಾಗುವ ವೆಬ್‌ಲಿಂಕ್‌ನಲ್ಲಿ ಅಭ್ಯರ್ಥಿಗಳು ನೋಂದಣಿ ಸಂಖ್ಯೆಯ ಜತೆಗೆ ಅಂಕಗಳನ್ನೂ ದಾಖಲಿಸಬೇಕು ಮತ್ತು ಅಂಕಪಟ್ಟಿಯನ್ನು ಅಪ್‌ಲೋಡ್ ಮಾಡಬೇಕು. ಅಭ್ಯರ್ಥಿಗಳು ದಾಖಲಿಸುವ ಅಂಕಗಳನ್ನು ಆಯಾ ಪರೀಕ್ಷಾ ಮಂಡಳಿಯಿಂದ ಪರಿಶೀಲಿಸಿ, ದೃಢೀಕರಿಸಿದ ನಂತರ ಸ್ಪಾಟ್ ರ‍್ಯಾಂಕ್’ ನೀಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.