ADVERTISEMENT

CET Results 2025: ಸಿಇಟಿ ಫಲಿತಾಂಶ ಇಂದು

​ಪ್ರಜಾವಾಣಿ ವಾರ್ತೆ
Published 23 ಮೇ 2025, 22:01 IST
Last Updated 23 ಮೇ 2025, 22:01 IST
<div class="paragraphs"><p>ಫಲಿತಾಂಶ ಪರಿಶೀಲನೆ</p></div>

ಫಲಿತಾಂಶ ಪರಿಶೀಲನೆ

   

ಸಂಗ್ರಹ ಚಿತ್ರ

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಮೇ 24ರಂದು ಪ್ರಕಟವಾಗಲಿದೆ. 

ADVERTISEMENT

ಏ.16ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ, ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳನ್ನು 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು.

ದ್ವಿತೀಯ ಪಿಯು ಪರೀಕ್ಷೆ–1 ಮತ್ತು ಪರೀಕ್ಷೆ–2, ಸಿಬಿಎಸ್‌ಇ, ಐಸಿಎಸ್‌ಇ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಪಡೆದ ಅಂಕಗಳ ಕೂಡುವಿಕೆ ಕಾರ್ಯವನ್ನು ಕೆಇಎ ಪೂರ್ಣಗೊಳಿಸಿದೆ. 

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ. 15ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. ಅವರಲ್ಲಿ ಹೆಚ್ಚಿನವರು ಕೇರಳದ ವಿದ್ಯಾರ್ಥಿಗಳು. ಈ ವಿದ್ಯಾರ್ಥಿಗಳ ಪಿಯು ಫಲಿತಾಂಶವನ್ನು ಕೇರಳ ಪದವಿಪೂರ್ವ ಶಿಕ್ಷಣ ಇಲಾಖೆ ಮೇ 21ರಂದು ಪ್ರಕಟಿಸಿದೆ.

‘ಮೇ 23ರಂದು ಸಿಇಟಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಕೆಲ ತಾಂತ್ರಿಕ ಕಾರಣಗಳಿಂದ ಒಂದು ದಿನ ಮುಂದೂಡಲಾಗಿದ್ದು, ಮೇ 24ರ ಬೆಳಿಗ್ಗೆ 11.30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರು ಫಲಿತಾಂಶ ಪ್ರಕಟಿಸುವರು. ಮಧ್ಯಾಹ್ನ 2 ಗಂಟೆ ನಂತರ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ  (https://cetonline.Karnataka.gov.in/ ugcetrank2025/ checkresult.aspx ಹಾಗೂ https://karresults.nic.in) ಫಲಿತಾಂಶದ ವಿವರಗಳು ಲಭ್ಯವಾಗಲಿವೆ’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.