ಬೆಂಗಳೂರು: ಹೈಕೋರ್ಟ್ ಆದೇಶದಂತೆ ಸಿದ್ಧಪಡಿಸಿದ ಸಿಇಟಿ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿಯನ್ನು ಅ. 1ರ ಮಧ್ಯಾಹ್ನ 2ಕ್ಕೆ ಪ್ರಕಟಿಸ
ಲಾಗುತ್ತಿದೆ.
ಹಿಂದಿನ ವರ್ಷ ಪಿಯು ತೇರ್ಗಡೆಯಾಗಿದ್ದು, ಈ ಬಾರಿಯೂ ಸಿಇಟಿ ಬರೆದ 24 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳ ದ್ವಿತೀಯ ಪಿಯು ಅಂಕಗಳಲ್ಲಿ 6 ಅಂಕಗಳನ್ನು ಕಡಿತಗೊಳಿಸಿ, ಉಳಿದ ಶೇ 50ರಷ್ಟು, ಈ ಬಾರಿಯ ಸಿಇಟಿಯ ಶೇ 50ರಷ್ಟು ಅಂಕಗಳನ್ನು ಸೇರಿಸಿ ಹೊಸ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿ ಸಿದ್ಧಪಡಿಸಲಾಗಿದೆ. ಇದರಿಂದ ಈ ಹಿಂದೆ ಪ್ರಕಟಿಸಿದ ಪಟ್ಟಿಯಲ್ಲಿಒಂದಷ್ಟು ವ್ಯತ್ಯಾಸಗಳಾಗಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ.
ಫಲಿತಾಂಶವನ್ನು ಪ್ರಾಧಿಕಾರದ ವೆಬ್ ಸೈಟ್ karresults.nic.inನಲ್ಲಿ ನೋಡಬಹುದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.