ADVERTISEMENT

ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 2 ಜನವರಿ 2020, 5:56 IST
Last Updated 2 ಜನವರಿ 2020, 5:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   
""

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಶಿಕ್ಷಣ ಕೋರ್ಸುಗಳಿಗೆ ಸಂಬಂಧಿಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಏಪ್ರಿಲ್ 22, 23 ಮತ್ತು 24 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಏಪ್ರಿಲ್ 22ರಂದು ಜೀವಶಾಸ್ತ್ರ ಮತ್ತು ಗಣಿತಶಾಸ್ತ್ರ, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಹಾಗೂ ಏಪ್ರಿಲ್ 24ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ‌

60 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:30 ರಿಂದ 11:50, ಮಧ್ಯಾಹ್ನ 2:30 ರಿಂದ 3:50 ರವರೆಗೆ ಪರೀಕ್ಷೆ ಇರಲಿದೆ.

ADVERTISEMENT

2020ರ ಮಾರ್ಚ್​ 4ರಿಂದ ಮಾರ್ಚ್​ 23ರವರೆಗೆ ದ್ವಿತೀ ಪಿಯುಸಿಯ ವಾರ್ಷಿಕ ಪರೀಕ್ಷೆ ನಡೆಯಲಿದೆ. ವಿಜ್ಞಾನ, ವಾಣಿಜ್ಯ ಮತ್ತು ಕಲೆ ಮೂರು ವಿಷಯಗಳ ಪರೀಕ್ಷೆಗಳು ಈ ಅವಧಿಯಲ್ಲೇ ನಡೆಯಲಿದೆ ಎಂದು ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.


ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್‌ ಕೋರ್ಸ್‌ಗಳಿಗೆ ಅಭ್ಯರ್ಥಿಗಳು ಎನ್‌ಟಿಎನವರು ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಗೂ ( NEET-UG-2020) ಹಾಜರಾಗಬೇಕು.ಆರ್ಕಿಟೆಕ್ಚರ್‌ ಕೋರ್ಸ್‌ನ ಪ್ರವೇಶಕ್ಕಾಗಿ ಅಭ್ಯರ್ಥಿಗಳು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್‌ ನವರು ನಡೆಸುವ NATA ಪರೀಕ್ಷೆ ಅಥವಾ JEE-Paper2ಗೆ ಹಾಜರಾಗಬೇಕು.

ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೈಬ್‌ಸೈಟ್‌ http://kea.kar.nic.in ಗೆ ಭೇಟಿ ನೀಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.