ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕೆ ಸೀಟು ಹಂಚಿಕೆ ಭಾಗವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಶೀಲನಾ ಚೀಟಿ (ವೆರಿಫಿಕೇಷನ್ ಸ್ಲಿಪ್) ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು ತಮ್ಮ ಅರ್ಜಿ ಭರ್ತಿ ಮಾಡುವಾಗ ನಮೂದಿಸಿದ ಮೀಸಲಾತಿ ಮತ್ತಿತರ ಕೋರಿಕೆಗಳು ಈ ಚೀಟಿಯಲ್ಲಿ ಉಲ್ಲೇಖವಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ವಿವಿಧ ಪ್ರಕಾರದ ಮೀಸಲು ಕೋರಿಕೆ ಪ್ರಕಾರವೇ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ನಮೂದಿಸಿದ ಮೀಸಲು ಕೋರಿಕೆಗಳು ಪರಿಶೀಲನಾ ಚೀಟಿಯಲ್ಲಿ ತಪ್ಪಾಗಿದ್ದರೆ ಸರಿ ಮಾಡಿಕೊಳ್ಳಲು ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುವುದು. ಕೆಇಎ ಕಚೇರಿಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.