ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಚೈತ್ರಾ ಕುಂದಾಪುರ ಹಾಗೂ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಗಳನ್ನು ಬಂಧಿಸಿ ಹಲವು ವಿಚಾರಗಳ ತನಿಖೆ ನಡೆಸುತ್ತಿದ್ದಾರೆ.ಈ ಮಧ್ಯೆ, ವಂಚನೆ ಪ್ರಕರಣದ ದೂರುದಾರ ಉದ್ಯಮಿ ಗೋವಿಂದ ಬಾಬು ಪೂಜಾರಿ ಮೇಲೆ ಸಿಸಿಬಿ ಅಧಿಕಾರಿಗಳಿಗೆ ಅನುಮಾನ ಹುಟ್ಟುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.