ADVERTISEMENT

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ ಮಾಹಿತಿ ನೀಡುವಂತೆ ಸರ್ಕಾರ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 15:59 IST
Last Updated 11 ಜೂನ್ 2025, 15:59 IST
ಚಕ್ರವರ್ತಿ ಸೂಲಿಬೆಲೆ
ಚಕ್ರವರ್ತಿ ಸೂಲಿಬೆಲೆ   

ಬೆಂಗಳೂರು: ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

2022ರಿಂದ 2025ರ ಮೇ 31ರ ವರೆಗೆ ದಾಖಲಾಗಿರುವ ಪ್ರಕರಣಗಳ ಮಾಹಿತಿ ಹಾಗೂ ಎಫ್‌ಐಆರ್ ಪ್ರತಿಗಳನ್ನು ಎಸ್‌.ಪಿ, ಪೊಲೀಸ್‌ ಪ್ರಧಾನ ಕಚೇರಿ, ಬೆಂಗಳೂರು–ಇಲ್ಲಿಗೆ ಕಳುಹಿಸುವಂತೆ ಆದೇಶಿಸಲಾಗಿದೆ.

ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ಬರೆದ ಪತ್ರದ ಮೇರೆಗೆ ಎಫ್‌ಐಆರ್ ಪ್ರತಿ, ತೆಗೆದುಕೊಂಡ ಕ್ರಮಗಳು ಹಾಗೂ ಪ್ರಸ್ತುತ ಹಂತದ ಮಾಹಿತಿ ಒದಗಿಸುವಂತೆ ಎಲ್ಲ ಪೊಲೀಸ್‌ ಕಮಿಷನರ್‌ಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶದಲ್ಲಿ ಸೂಚಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.