
ಪ್ರಜಾವಾಣಿ ವಾರ್ತೆ
ಛಲವಾದಿ ನಾರಾಯಣಸ್ವಾಮಿ
ಬಾಗಲಕೋಟೆ: ‘ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಹೋಗಿ, ಇನ್ನೊಬ್ಬರು ಬರಬಹುದು. ಆದರೆ, ಕೆಟ್ಟ ಆಡಳಿತದಿಂದ ಜನರು ಪರಿತಪಿಸುವ ಪರಿಸ್ಥಿತಿ ಬದಲಾಗುವುದಿಲ್ಲ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಇಲ್ಲಿ ಹೇಳಿದರು.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ಕುರಿತ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನೇ ಮರೆತಿದೆ. ಇಷ್ಟೆಲ್ಲ ನಡೆದರೂ ಬದಲಾವಣೆ ಆಗುವುದೇ, ಇಲ್ಲವೇ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸುತ್ತಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.