
ರಮೇಶ್ ಬಾಬು
ಬೆಂಗಳೂರು: ‘ತಮ್ಮನ್ನು ರಾಜಕೀಯವಾಗಿ ಬೆಳೆಸಿದ್ದು ಯಾರು ಎಂಬುದನ್ನು ಛಲವಾದಿ ನಾರಾಯಣ ಸ್ವಾಮಿ ಹೇಳಬೇಕು’ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹೇಳಿದರು.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ರಮೇಶ್ ಬಾಬು, ‘ಅವರು ಮಲ್ಲಿಕಾರ್ಜುನ ಖರ್ಗೆಯವರಿಂದ ಬೆಳೆದರೋ, ಬೇರೆಯವರಿಂದ ಬೆಳೆದರೋ ಎಂದು ತಿಳಿಸಬೇಕು’ ಎಂದರು.
‘ಆರ್‌ಎಸ್‌ಎಸ್ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದ ವಿಚಾರ ರಾಜ್ಯದಲ್ಲಿ ಅನೇಕ ಚರ್ಚೆಗಳಿಗೆ ಅವಕಾಶ ಮಾಡಿಕೊಟ್ಟಿದೆ. ಆರೋಗ್ಯಕರ ಚರ್ಚೆಗೆ ಕಾಂಗ್ರೆಸ್‌ನ ವಿರೋಧ ಇಲ್ಲ. ಆದರೆ, ವ್ಯಕ್ತಿಗತ ಟೀಕೆ, ತೇಜೋವಧೆ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಛಲವಾದಿ ನಾರಾಯಣ ಸ್ವಾಮಿ ಅವರು ಪ್ರಿಯಾಂಕ್ ಖರ್ಗೆ ಅವರ ಬಗ್ಗೆ ಮಾತನಾಡಿದ್ದಾರೆ’ ಎಂದರು.
‘ಪ್ರಿಯಾಂಕ್ ಖರ್ಗೆ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರು ಯಾವುದಾದರೂ ದಲಿತ ನಾಯಕರನ್ನು ಬೆಳೆಸಿದ್ದಾರೆಯೇ ಎಂದು ಛಲವಾದಿ ನಾರಾಯಣ ಸ್ವಾಮಿ ಪ್ರಶ್ನೆ ಕೇಳಿದ್ದಾರೆ. ಯಲಹಂಕದಲ್ಲಿ ಸೈಕಲ್ ತುಳಿದುಕೊಂಡಿದ್ದ ಅವರಿಗೆ ರಾಜಕೀಯವಾಗಿ ಆಶ್ರಯ ಕೊಟ್ಟವರು ಯಾರು ಎಂಬುದನ್ನು ಮೊದಲು ಹೇಳಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.