ADVERTISEMENT

ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಗುಪ್ತ ಚರ್ಚೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 17:50 IST
Last Updated 16 ಏಪ್ರಿಲ್ 2019, 17:50 IST
ಶ್ರೀರಂಗಪಟ್ಟಣದ ಹೋಟೆಲ್‌ನಲ್ಲಿ ಮಂಗಳವಾರ ಮುಖಂಡರಾದ ಎನ್.ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದರು
ಶ್ರೀರಂಗಪಟ್ಟಣದ ಹೋಟೆಲ್‌ನಲ್ಲಿ ಮಂಗಳವಾರ ಮುಖಂಡರಾದ ಎನ್.ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದರು   

ಶ್ರೀರಂಗಪಟ್ಟಣ: ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲು ನಿರಾಕರಿಸಿ ಪ್ರಸಕ್ತ ಲೋಕಸಭಾ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿರುವ ಕಾಂಗ್ರೆಸ್ ಮುಖಂಡರಾದ ಎನ್.ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಮಂಗಳವಾರ ಪಟ್ಟಣದಲ್ಲಿ ಚರ್ಚೆ ನಡೆಸಿದರು.

ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದ ಸಮಯದಲ್ಲೇ ಇಲ್ಲಿನ ಹೋಟೆಲ್‌ನಲ್ಲಿ ಇಬ್ಬರು ಅರ್ಧ ಗಂಟೆ ಚರ್ಚೆ ನಡೆಸಿದ್ದು ಮಹತ್ವ ಪಡೆದುಕೊಂಡಿದೆ. ಸುಮಲತಾಗೆ ಪರೋಕ್ಷ ಬೆಂಬಲ ನೀಡಿದ್ದು, ಮಂಡ್ಯದ ಸ್ವಾಭಿಮಾನಿ ಸಮಾವೇಶದ ಯಶಸ್ಸಿನ ಬಗ್ಗೆ ಈ ಇಬ್ಬರೂ ಮುಖಂಡರು ತಮ್ಮ ಆಪ್ತರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದರು.

ಮನ್‌ಮುಲ್ ನಿರ್ದೇಶಕ ಬಿ.ಬೋರೇಗೌಡ, ಗುತ್ತಿಗೆದಾರ ಜಿ.ಎಲ್.ಲಕ್ಷ್ಮೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬಿ.ಎಸ್.ರಾಮಚಂದ್ರು ಜತೆಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.