ADVERTISEMENT

ಚಾಮರಾಜನಗರ ಆಮ್ಲಜನಕ ದುರಂತ: ಕುನ್ಹ ಆಯೋಗದಿಂದ ವರದಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 23:37 IST
Last Updated 1 ಡಿಸೆಂಬರ್ 2025, 23:37 IST
<div class="paragraphs"><p>ಆಮ್ಲಜನಕ&nbsp;ದುರಂತ:&nbsp; ದುರ್ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರು ಆಸ್ಪತ್ರೆ ಮುಂದೆ ರೋದಿಸಿಸುತ್ತಿರುವುದು.<br> <br></p></div>

ಆಮ್ಲಜನಕ ದುರಂತ:  ದುರ್ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರು ಆಸ್ಪತ್ರೆ ಮುಂದೆ ರೋದಿಸಿಸುತ್ತಿರುವುದು.

   

ಸಂಗ್ರಹ ಚಿತ್ರ   

ADVERTISEMENT

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ರೋಗದ ಅವಧಿಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಸಾವು ನೋವುಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹ ನೇತೃತ್ವದ ಆಯೋಗವು ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 32 ಮಂದಿ ಮೃತಪಟ್ಟಿದ್ದರು. ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಲು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಡಳಿತಗಳ ನಡುವಿನ ಸಮನ್ವಯದ ಕೊರತೆ ಕಾರಣವೇ ಎಂಬ ಬಗ್ಗೆ ವರದಿಯಲ್ಲಿ ಪ್ರಸ್ತಾಪಿಸಿರುವ ಸಾಧ್ಯತೆಯಿದೆ. ಈ ಘಟನೆಗೆ ಕಾರಣರಾದ ನಿರ್ದಿಷ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಮೇಲೆ ಕ್ರಮ ಕೈಗೊಳ್ಳುವಂತೆಯೂ ವರದಿಯಲ್ಲಿ ಶಿಫಾರಸು ಮಾಡಲಾಗಿದೆ ಎಂದು ಗೊತ್ತಾಗಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಈ ಘಟನೆಯ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ನೇತೃತ್ವದ ಸಮಿತಿಯನ್ನು ರಚಿಸಲಾಗಿತ್ತು. ಆದರೆ, ಆ ಸಮಿತಿಯ ವರದಿಯು ಅಧಿಕಾರಿಗಳನ್ನು ರಕ್ಷಿಸುವಂತಿದೆ ಮತ್ತು ನೈಜ ಸಂಗತಿಗಳನ್ನು ಮರೆಮಾಚಿದೆ ಎಂದು ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಈ ಪ್ರಕರಣದ ಮರು ತನಿಖೆ ನಡೆಸಲು ಕುನ್ಹ ಅವರ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.