ADVERTISEMENT

ಚಾಮರಾಜನಗರ ದುರಂತ: ಪರಿಹಾರ ಹೆಚ್ಚಳ ಕುರಿತು ವಿಚಾರಣೆ

​ಪ್ರಜಾವಾಣಿ ವಾರ್ತೆ
Published 27 ಮೇ 2021, 21:52 IST
Last Updated 27 ಮೇ 2021, 21:52 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಚಾಮರಾಜನಗರದ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ 24 ಜನರ ಕುಟುಂಬಗಳಿಗೆ ಪರಿಹಾರ ಹೆಚ್ಚಿಸುವ ಸಂಬಂಧ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಹೈಕೋರ್ಟ್ ತಿಳಿಸಿದೆ.

‘ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಬೇಕು ಎಂದು ವಿಚಾರಣೆ ವೇಳೆ ವಕೀಲರು ಮನವಿ ಮಾಡಿದಾಗ, ಈ ಬಗ್ಗೆ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುವುದು’ ಎಂದು ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.

ದುರಂತದ ಬಗ್ಗೆ ವರದಿ ಸಲ್ಲಿಸಿರುವ ಕಾನೂನು ಸೇವೆಗಳ ಪ್ರಾಧಿಕಾರದ ಮೂವರು ಸದಸ್ಯರ ಸಮಿತಿ, ‘ಮೇ 2ರಿಂದ ಮೇ 10ರ ನಡುವೆ ಆಮ್ಲಜನಕ ಕೊರತೆಯಿಂದ 36 ಮಂದಿ ಮೃತಪಟ್ಟಿದ್ದಾರೆ’ ಎಂದು ಶಂಕಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.