ADVERTISEMENT

ದೇಗುಲ ನೌಕರರ ಮುಷ್ಕರ ಇಂದಿನಿಂದ

ಮನವೊಲಿಕೆ ಯತ್ನ ವಿಫಲ; ಪ್ರತಿಭಟನೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2018, 20:15 IST
Last Updated 13 ಡಿಸೆಂಬರ್ 2018, 20:15 IST

ಮೈಸೂರು: ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಸಮೂಹ ದೇಗುಲಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ. 14ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ಭಕ್ತಾದಿಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ.

ದೇವಸ್ಥಾನ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಜಿಲ್ಲಾಡಳಿತ ಗುರುವಾರ ನಡೆಸಿದ ಮೊದಲ ಸುತ್ತಿನ ಮಾತುಕತೆ ವಿಫಲಗೊಂಡಿದೆ.

ಕೇವಲ ಮೌಖಿಕ ಭರವಸೆಗಳನ್ನಷ್ಟೇ ನೀಡಲಾಗುತ್ತಿದೆ. ಲಿಖಿತ ಭರವಸೆ ಬೇಕು. ದೇಗುಲಗಳ ಪೂಜೆಗೆ ಅಡ್ಡಿ ಮಾಡುವುದಿಲ್ಲ. ಬೆಳಿಗ್ಗೆ ಪೂಜೆ ಮುಗಿಸಿದ ನಂತರ ದೇವಸ್ಥಾನಗಳ ಮುಂದೆ ಸಂಜೆಯವರೆಗೂ ಧರಣಿ ನಡೆಸಲಾಗುವುದು ಎಂದು ಸಂಘದ ಕಾರ್ಯದರ್ಶಿ ವಿಶ್ವನಾಥ್ ತಿಳಿಸಿದರು.

ADVERTISEMENT

24 ದೇವಸ್ಥಾನಗಳ 181 ಮಂದಿ ನೌಕರರು ಮುಷ್ಕರ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.