ADVERTISEMENT

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2024, 20:45 IST
Last Updated 10 ಜನವರಿ 2024, 20:45 IST
<div class="paragraphs"><p> ಮಳೆ ಸಾಧ್ಯತೆ</p></div>

ಮಳೆ ಸಾಧ್ಯತೆ

   

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಕೊಡಗಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಯಿದೆ. ಬೆಂಗಳೂರಿನಲ್ಲಿ ಮೋಡ ಕವಿದವಾತಾವರಣ ಇರಲಿದೆ.ಕೆಲವು ಭಾಗ ಗಳಲ್ಲಿ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣ ಕಂಡು ಬರಲಿದೆ ಎಂದು ತಿಳಿಸಿದೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.