ಪೊಲೀಸ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಕುಮಾರ ಚಂದ್ರಶೇಖರ ನಾಥ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಉಪ್ಪಾರಪೇಟೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
‘ಮುಸ್ಲಿಮರಿಗೆ ನೀಡಿರುವ ಮತದಾನದ ಹಕ್ಕನ್ನು ರದ್ದುಪಡಿಸಲು ಕಾನೂನು ಜಾರಿ ಮಾಡಬೇಕು’ ಎಂದು ಸ್ವಾಮೀಜಿ ಸ್ವಾತಂತ್ರ್ಯ ಉದ್ಯಾನದಲ್ಲಿ ನ.26ರಂದು ನಡೆದ ಪ್ರತಿಭಟನೆಯಲ್ಲಿ ಹೇಳಿದ್ದರು.
ಸೈಯದ್ ಅಬ್ಬಾಸ್ ಅವರ ದೂರು ಆಧರಿಸಿ ಬಿಎನ್ಎಸ್ ಸೆಕ್ಷನ್ 299ರ ಅಡಿ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ನೋಟಿಸ್ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.
ಆಕ್ರೋಶ ವ್ಯಕ್ತವಾದ ಕೂಡಲೇ ಸ್ಪಷ್ಟನೆ ನೀಡಿದ್ದ ಸ್ವಾಮೀಜಿ, ‘ಮುಸ್ಲಿಮರು ಕೂಡ ಈ ದೇಶದ ಪ್ರಜೆಗಳು. ಎಲ್ಲರಂತೆ ಅವರಿಗೂ ಮತದಾನದ ಹಕ್ಕಿದೆ. ನನ್ನ ಹೇಳಿಕೆಯಿಂದ ಮುಸ್ಲಿಂ ಬಾಂಧವರಿಗೆ ನೋವಾಗಿದ್ದರೆ, ಅದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.