ADVERTISEMENT

ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಕ್ರಮ ಬದಲಾವಣೆ, ದರ ಪರಿಷ್ಕರಣೆ ಇಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜೂನ್ 2023, 13:33 IST
Last Updated 12 ಜೂನ್ 2023, 13:33 IST
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಕ್ರಮದಲ್ಲಿ ಬದಲಾವಣೆ ಮಾಡಲಾಗುವುದು. ಆದರೆ, ದರ ಪರಿಷ್ಕರಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್‌ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ಇಂದಿರಾ ಕ್ಯಾಂಟೀನ್‌ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಮತ್ತೆ ಚಾಲನೆ ನೀಡಲಾಗುವುದು’ ಎಂದಿದ್ದಾರೆ.

‘ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ 70ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ 30ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.