ADVERTISEMENT

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಬದಲಾವಣೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 19:27 IST
Last Updated 23 ನವೆಂಬರ್ 2021, 19:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಆಯಾ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳ ಬದಲಿಗೆ ಮಂಜೂರಾದ ಹುದ್ದೆಗಳ ಆಧಾರದಲ್ಲಿ ಶೇಕಡವಾರು ಮಿತಿಯನ್ನು ಲೆಕ್ಕಾಚಾರ ಮಾಡುವಂತೆ ಸೂಚಿಸಿದೆ.

ಆಯಾ ತಾಲ್ಲೂಕನ್ನು ಒಂದು ಘಟಕವಾಗಿ ಪರಿಗಣಿಸಿ, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳ ಆಧಾರದಲ್ಲಿ ಶೇಕಡವಾರು ಮಿತಿ ನಿಗದಿಪಡಿಸುವಂತೆ 2020ರ ನವೆಂಬರ್‌ 12ರಂದು ಆದೇಶ ಹೊರಡಿಸಲಾಗಿತ್ತು. ಇದರಿಂದಾಗಿ ಅತ್ಯಧಿಕ ಸಂಖ್ಯೆಯ ಖಾಲಿ ಹುದ್ದೆಗಳಿರುವ 40 ಕ್ಕೂ ಹೆಚ್ಚು ತಾಲ್ಲೂಕುಗಳ ಶಿಕ್ಷಕರು ವರ್ಗಾವಣೆ ಪ್ರಕ್ರಿಯೆಯಿಂದ ಹೊರಗುಳಿದಿದ್ದರು.

‘ವರ್ಗಾವಣೆ ಅವಕಾಶದಿಂದ ವಂಚಿತರಾಗಿದ್ದ 40ಕ್ಕೂ ಹೆಚ್ಚು ತಾಲ್ಲೂಕುಗಳ ಶಿಕ್ಷಕರಿಗೆ ಈ ಆದೇಶದಿಂದ ಅನುಕೂಲವಾಗಲಿದೆ. ಈ ಎಲ್ಲ ಶಿಕ್ಷಕರೂ ಅರ್ಜಿ ಸಲ್ಲಿಸಬೇಕಿರುವುದರಿಂದ ಬುಧವಾರದಿಂದ ಆರಂಭವಾಗಬೇಕಿದ್ದ ವರ್ಗಾವಣೆ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ಕೆಲವು ದಿನಗಳ ಕಾಲ ಮುಂದೂಡುವ ಸಾಧ್ಯತೆ ಇದೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.