ADVERTISEMENT

ಐದು ರಾಜ್ಯಗಳ ಫಲಿತಾಂಶ ಬಳಿಕ ಬದಲಾವಣೆ ಗಾಳಿ: ಎಚ್.ಡಿ. ದೇವೇಗೌಡ

ಪ್ರಾದೇಶಿಕ ಪಕ್ಷಗಳಿಗೆ ಮಹತ್ವ: ಎಚ್.ಡಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2022, 20:42 IST
Last Updated 12 ಫೆಬ್ರುವರಿ 2022, 20:42 IST
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಶನಿವಾರ ಎಚ್‌.ಡಿ. ದೇವೇಗೌಡ ಹಾಗೂ ಚೆನ್ನಮ್ಮ ಅವರು ಅಕ್ಕಿ, ಬೆಲ್ಲ ಹಾಗೂ ತೆಂಗಿನಕಾಯಿಗಳೊಂದಿಗೆ ತುಲಾಭಾರ ಸೇವೆ ನೆರವೇರಿಸಿದರು.
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಶನಿವಾರ ಎಚ್‌.ಡಿ. ದೇವೇಗೌಡ ಹಾಗೂ ಚೆನ್ನಮ್ಮ ಅವರು ಅಕ್ಕಿ, ಬೆಲ್ಲ ಹಾಗೂ ತೆಂಗಿನಕಾಯಿಗಳೊಂದಿಗೆ ತುಲಾಭಾರ ಸೇವೆ ನೆರವೇರಿಸಿದರು.   

ಮಂಗಳೂರು: ‘ಐದು ರಾಜ್ಯಗಳ ಚುನಾ ವಣಾ ಫಲಿತಾಂಶದ ಬಳಿಕ ದೇಶದ ರಾಜಕಾರಣದಲ್ಲಿ ಬದಲಾವಣೆಯ ಸಾಧ್ಯತೆ ಇದೆ. ಪ್ರಾದೇಶಿಕ ಪಕ್ಷಗಳ ಬೆಂಬಲವಿಲ್ಲದೆ ರಾಷ್ಟ್ರೀಯ ಪಕ್ಷಗಳು ಅಧಿಕಾರ ನಡೆಸುವುದು ಕಷ್ಟ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ತಿಳಿಸಿದರು.

ಶನಿವಾರ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್, ಬಿಜೆಪಿ ಪಕ್ಷಗಳ ನಡುವೆ ಜೆಡಿಎಸ್‌ ಸಣ್ಣ ಪಕ್ಷ. ಹೋರಾಟ ಮುಂದುವರಿಯುತ್ತದೆ’ ಎಂದರು.

‘ರಾಜ್ಯದಲ್ಲಿ ಹಿಜಾಬ್‌ ಎಲ್ಲಿಂದ ಆರಂಭ ಆಯಿತು? ಹೇಗೆ ಆರಂಭ ಆಯಿತು ಎನ್ನುವುದು ನನಗೆ ಗೊತ್ತು. ಈ ವಿಷಯದಲ್ಲಿ ಕಾಂಗ್ರೆಸ್‌, ಬಿಜೆಪಿ ಆರೋಪ, ಪ್ರತ್ಯಾರೋಪದಲ್ಲಿ ತೊಡ ಗಿವೆ. ಈ ಬಗ್ಗೆ ನಾನೇನೂ ಹೇಳಲಾರೆ. ಕರಾವಳಿ ಭಾಗದಲ್ಲಿ ಸಮಸ್ಯೆಗಳನ್ನು ಹುಟ್ಟು ಹಾಕುವಂತಹ ಶಕ್ತಿಗಳು ಇವೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.