
ಪ್ರಜಾವಾಣಿ ವಾರ್ತೆ
ಅಂಚೆ ಚೀಟಿ( ಪ್ರಾತಿನಿಧಿಕ ಚಿತ್ರ)
ನವದೆಹಲಿ: ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಗೌರವಾರ್ಥ ಅಂಚೆ ಚೀಟಿಯನ್ನು ಅಂಚೆ ಇಲಾಖೆ ಇದೇ 23ರಂದು ಬಿಡುಗಡೆ ಮಾಡಲಿದೆ.
ಬ್ರಿಟಿಷರ ವಿರುದ್ಧ ಚನ್ನಮ್ಮ ಅವರು ಐತಿಹಾಸಿಕ ವಿಜಯಕ್ಕೀಗ 200 ವರ್ಷ ಸಂದಲಿದ್ದು, ಇದರ ಜ್ಞಾಪಕಾರ್ಥವಾಗಿ ಕೇಂದ್ರ ಸರ್ಕಾರ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಅರವಿಂದ ಬೆಲ್ಲದ, ಅಭಯ್ ಪಾಟೀಲ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಪ್ರಮುಖರು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.