ಬೆಂಗಳೂರು: ‘ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಜನರು, ಕಾರ್ಯಕರ್ತರು ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಳ್ಳಬಾರದು ಎಂಬ ಉದ್ದೇಶದಿಂದ ಯೋಗೇಶ್ವರ್ ಅವರು ಹಾಗೆ ಮಾತನಾಡಿದ್ದಾರೆ’ ಎಂದು ಕಾಂಗ್ರೆಸ್‌ನ ಡಿ.ಕೆ.ಸುರೇಶ್ ಹೇಳಿದರು.
ಯೋಗೇಶ್ವರ್ ಸೋಲುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ನಗರದಲ್ಲಿ ಗುರುವಾರ ಸುದ್ದಿಗಾರರು ಪ್ರಶ್ನಿಸಿದಾಗ, ‘ನಮಗೆ ಗೆಲ್ಲುವ ವಿಶ್ವಾಸವಿದೆ. ನಮ್ಮಿಂದಾಗಿ ಜನರು ಹಣ ಕಳೆದುಕೊಳ್ಳಬಾರದು ಎಂಬುದು ಯೋಗೇಶ್ವರ್ ಅವರ ಮಾತು’ ಎಂದರು.
ಎಚ್.ಡಿ.ಕುಮಾರಸ್ವಾಮಿ ಕುರಿತ ಜಮೀರ್ ಅಹಮದ್ ಅವರ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, ‘ಅವರಿಬ್ಬರೂ ಸ್ನೇಹಿತರು. ಈ ಹಿಂದೆ ಹಲವು ಬಾರಿ ಹಾಗೆ ಕರೆದುಕೊಂಡಿದ್ದಾರೆ. ಮಾಧ್ಯಮಗಳು ಆಗಲೇ ಆ ಬಗ್ಗೆ ಎಚ್ಚರಿಸಿದ್ದರೆ, ಅವರು ಸರಿಪಡಿಸಿಕೊಳ್ಳುತ್ತಿದ್ದರು. ಆದರೆ ಈಗ ಮತದಾನಕ್ಕೆ ಒಂದೆರಡು ದಿನ ಇರುವಾಗ ಮಾಧ್ಯಮಗಳು ಅದನ್ನು ದೊಡ್ಡದಾಗಿ ಬಿಂಬಿಸಿದವು. ಮಾಧ್ಯಮಗಳಿಗೆ ನಮ್ಮ ಪಕ್ಷದ ಮೇಲೆ ಇಷ್ಟು ಕೋಪವೇಕೆ’ ಎಂದು ಪ್ರಶ್ನಿಸಿದರು.
‘ಜಮೀರ್ ಅವರ ಹೇಳಿಕೆಯಿಂದ ಪಕ್ಷಕ್ಕೆ ಧಕ್ಕೆಯಾಗಿದೆಯೋ, ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ’ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.