ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಯಾವ ಪಕ್ಷದವರು ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಬೇಕು ಎಂಬುದನ್ನು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದ ಜೆಪಿ ಭವನದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಮಾತನಾಡಿದ ನಿಖಿಲ್, ಲೋಕಸಭಾ ಚುನಾವಣೆಯನ್ನು ಜೆಡಿಎಸ್–ಬಿಜೆಪಿ ಮೈತ್ರಿಮಾಡಿಕೊಂಡು ಎದುರಿಸಿವೆ. ಚನ್ನಪಟ್ಟಣ ಉಪಚುನಾವಣೆಯನ್ನೂ ಅದೇ ರೀತಿ ಎದುರಿಸಬೇಕಾಗುತ್ತದೆ. ಕ್ಷೇತ್ರವನ್ನು ಪಕ್ಷದಲ್ಲೇ ಉಳಿಸಿಕೊಳ್ಳಬೇಕೇ ಅಥವಾ ಬಿಜೆಪಿಗೆ ಬಿಟ್ಟುಕೊಟ್ಟು ಸಹಕರಿಸಬೇಕೇ ಎಂಬುದನ್ನು ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.