ADVERTISEMENT

ವಿದೇಶದಿಂದ ಬಂದ ವ್ಯಕ್ತಿಗಳ ಮಾಹಿತಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 13:40 IST
Last Updated 14 ಮಾರ್ಚ್ 2020, 13:40 IST
ಸಿದ್ದಾಪುರ ಪಟ್ಟಣದಲ್ಲಿ ಜನರ ಓಡಾಟ ವಿರಳವಾಗಿತ್ತು
ಸಿದ್ದಾಪುರ ಪಟ್ಟಣದಲ್ಲಿ ಜನರ ಓಡಾಟ ವಿರಳವಾಗಿತ್ತು   

ಸಿದ್ದಾಪುರ: ಕೋವಿಡ್ 19 ಭೀತಿಯಿಂದ ಸಿದ್ದಾಪುರ ಪಟ್ಟಣದಲ್ಲಿ ಜನಸಂಖ್ಯೆ ವಿರಳವಾಗಿದ್ದು, ಮಾಂಸ, ಮೀನು ಸೇರಿದಂತೆ ಅಂಗಡಿಗಳಲ್ಲಿ ಗ್ರಾಹಕರು ಕುಂಠಿತಗೊಂಡಿದೆ.

ಈಗಾಗಲೇ ಜಿಲ್ಲಾದ್ಯಂತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಸಿದ್ದಾಪುರ ಹಾಗೂ ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ 14 ದಿನಗಳ ಒಳಗೆ ವಿದೇಶದಿಂದ ಬಂದವರ ಮಾಹಿತಿಯನ್ನು ಗ್ರಾ.ಪಂ ವತಿಯಿಂದ ಸಂಗ್ರಹಿಸಲಾಗಿದೆ. ನೆಲ್ಯಹುದಿಕೇರಿ ಪಿ.ಡಿ.ಒ ಅನಿಲ್ ಕುಮಾರ್ ಹಾಗೂ ಸಿದ್ದಾಪುರ ಪಿ.ಡಿ.ಓ ವಿಶ್ವನಾಥ್ ಗ್ರಾಮಕ್ಕೆ ಇತ್ತೀಚೆಗೆ ವಿದೇಶದಿಂದ ಬಂದವರ ಮಾಹಿತಿ ಕಲೆ ಹಾಕಿ, ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಪಡಲು ಮನವಿ ಮಾಡಿದರು.

ಪಟ್ಟಣದಲ್ಲಿ ಜನಸಂಖ್ಯೆ ವಿರಳವಾಗಿದ್ದು, ಹೊರರಾಜ್ಯ ಹಾಗೂ ಹೊರ ಜಿಲ್ಲೆಯಿಂದ ಬರುವ ಬಸ್ಸ್‍ಗಳಲ್ಲಿ ಪ್ರಯಾಣಿಕ ಸಂಖ್ಯೆ ಕಡಿಮೆಯಾಗಿದೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚು ಹೋಮ್‍ಸ್ಟೇ ಹಾಗೂ ರೆಸಾರ್ಟ್‍ಗಳು ಇದ್ದು, ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿದೆ. ವಿವಿಧ ದೇವಸ್ಥಾನಗಳಲ್ಲಿ ಉತ್ಸವಗಳು ಆರಂಭವಾಗಲಿದ್ದು, ಕೊರೊನಾ ವೈರಸ್‌ ಭೀತಿಯಿಂದ ಉತ್ಸವಗಳು ಕೂಡ ಮುಂದೂಡುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.