ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯತೀರ್ಥಹಳ್ಳಿಯಲ್ಲಿ ಚಿರತೆಯೊಂದು ಮನೆಯಂಗಳದಲ್ಲಿ ಕಟ್ಟಿದ್ದ ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ.
ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಈ ದೃಶ್ಯ ಮನೆಯ ಮುಂದೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಾಂಪೌಂಡ್ ಹಾರಿ ಬಂದು ನಾಯಿಯನ್ನು ಹುಡುಕಿ ಹೊತ್ತೊಯ್ದಿದೆ. ಈ ಸಮಯದಲ್ಲಿ ಮನೆಯವರೆಲ್ಲಾ ಮಲಗಿದ್ದರು ಎಂದು ಮಾಲೀಕರು ತಿಳಿಸಿದ್ದಾರೆ.ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.