ADVERTISEMENT

‘ಚೇನಂಡ ಹಾಕಿ ಪಂದ್ಯಾವಳಿ’ಗೆ ₹1 ಕೋಟಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 13:42 IST
Last Updated 2 ನವೆಂಬರ್ 2025, 13:42 IST
<div class="paragraphs"><p>(ಚಿತ್ರ–@CMofKarnataka)</p></div>

(ಚಿತ್ರ–@CMofKarnataka)

   

ಬೆಂಗಳೂರು: ‘ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ₹ 1 ಕೋಟಿ ಅನುದಾನ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ‘ಚೇನಂಡ ಹಾಕಿ ಪಂದ್ಯಾವಳಿ’ಯ ಲೋಗೊವನ್ನು ಭಾನುವಾರ ಬಿಡುಗಡೆ ಮಾಡಿದ ಅವರು, ‘ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು’ ಎಂದು ಬಣ್ಣಿಸಿದರು.

ADVERTISEMENT

2026ರ ಮೇ ತಿಂಗಳಲ್ಲಿ ಈ ಪಂದ್ಯಾವಳಿ ನಡೆಯಲಿದೆ. ‘ಪಂದ್ಯಾವಳಿ ವೀಕ್ಷಿಸಲು ನಾನೂ ಬರುತ್ತೇನೆ’ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

‘ಕೊಡಗಿನ ಹಾಕಿ ಪಟುಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ’ ಎಂದು ಶ್ಲಾಘಿಸಿದರು.

‘ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ’ ಎಂದರು.

ಸಚಿವರಾದ ಎನ್‌.ಎಸ್‌. ಬೋಸರಾಜು, ಬೈರತಿ ಸುರೇಶ್, ಶಿವರಾಜ್ ತಂಗಡಗಿ, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್‌. ಪೊನ್ನಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಕೊಡವ ಸಮುದಾಯದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.