ADVERTISEMENT

ಚೆನ್ನಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು: ಸೋಮಣ್ಣ ಆಗ್ರಹ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2025, 14:12 IST
Last Updated 23 ಅಕ್ಟೋಬರ್ 2025, 14:12 IST
ಚೆನ್ನಮ್ಮ ಭಾವಚಿತ್ರಕ್ಕೆ ವಿ.ಸೋಮಣ್ಣ ಹಾಗೂ ಜಗದೀಶ ಶೆಟ್ಟರ್ ಪುಷ್ಪಾ‌ರ್ಚನೆ ಮಾಡಿದರು. 
ಚೆನ್ನಮ್ಮ ಭಾವಚಿತ್ರಕ್ಕೆ ವಿ.ಸೋಮಣ್ಣ ಹಾಗೂ ಜಗದೀಶ ಶೆಟ್ಟರ್ ಪುಷ್ಪಾ‌ರ್ಚನೆ ಮಾಡಿದರು.    

ನವದೆಹಲಿ: ಬೈಲಹೊಂಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿಯನ್ನು ಅಭಿವೃದ್ಧಿಗೊಳಿಸಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆಗ್ರಹಿಸಿದರು. 

ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿ ಗುರುವಾರ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಅವರ 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವದಲ್ಲಿ ಅವರು ಮಾತನಾಡಿದರು. 

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಚೆನ್ಮಮ್ಮ ಅವರ ಜೀವನ ಮತ್ತು ಸಾಧನೆ ಕುರಿತು ಎಲ್ಲ ಭಾಷೆಗಳಲ್ಲೂ ಪುಸ್ತಕ ಹೊರತರಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ ಎಂದರು. 

ADVERTISEMENT

ಶುಕ್ರವಾರ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮ ಅವರ 201ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವೀರರಾಣಿ ಚೆನ್ಮಮ್ಮ ಅವರ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದರು. 

ಸಂಸದರಾದ ಜಗದೀಶ ಶೆಟ್ಟರ್, ಸುಧಾಮೂರ್ತಿ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಬಸವ ಜಯಮೃತ್ಯುಂಜಯ ಸ್ವಾಮೀಜಿ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.