ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಶಾಸಕ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಂತೆಯೇ ‘ಪ್ರಕರಣದ ದೂರುದಾರರಿಗೆ ₹1 ಕೋಟಿ 24 ಲಕ್ಷ ಮೊತ್ತವನ್ನು ನಾಗೇಂದ್ರ ಪಾವತಿಸಬೇಕು’ ಎಂದು ಆದೇಶಿಸಿದೆ.
ಈ ಸಂಬಂಧ ‘ಮೆಸರ್ಸ್ ವಿಎಸ್ಎಲ್ ಸ್ಟೀಲ್ ಲಿಮಿಟೆಡ್ ಕಂಪನಿ’ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಘೋಡ್ಕೆ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ’ದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಬುಧವಾರ ಪ್ರಕಟಿಸಿದರು.
ನಾಗೇಂದ್ರ ಅವರು ಪರಿಹಾರ ರೂಪದಲ್ಲಿ ದೂರುದಾರರಿಗೆ ಒಟ್ಟು ₹1.24 ಕೋಟಿ ಹಾಗೂ ಸರ್ಕಾರಕ್ಕೆ ₹10 ಸಾವಿರ ದಂಡ ಪಾವತಿಸಲು ಆದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.